ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ (ಐಒಸಿ) ಅಥ್ಲೀಟ್‌ಗಳ ಆಯೋಗದ ಸದಸ್ಯೆಯಾಗಿ ಸೈನಾ ನೆಹ್ವಲ್ ನೇಮಕ

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಲ್ ಅವರು ಅಂತರರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ (ಐಒಸಿ) ಅಥ್ಲೀಟ್‌ಗಳ ಆಯೋಗದ ಸದಸ್ಯೆಯಾಗಿ ನೇಮಕವಾಗಿದ್ದಾರೆ. ಭಾರತೀಯ ಕ್ರೀಡಾಪಟು ಒಬ್ಬರಿಗೆ ಸಿಕ್ಕಿರುವ ವಿಶೇಷ ಗೌರವ ಇದಾಗಿದೆ. ಐಒಸಿ ಅಧ್ಯಕ್ಷ ಥಾಮಸ್‌ ಬಾಕ್‌ ಅವರು ಸೈನಾಗೆ ಪತ್ರ ಬರೆದು ಈ ವಿಷಯವನ್ನು ತಿಳಿಸಿದ್ದಾರೆ. ಏಂಜೆಲಾ ರುಗೆಯಿರೊ ಅವರು ಆಯೋಗದ ಅಧ್ಯಕ್ಷರಾಗಿದ್ದು, ಒಂಬತ್ತು ಮಂದಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಆಯೋಗದಲ್ಲಿ ಒಟ್ಟು ಹತ್ತು ಮಂದಿ ಸದಸ್ಯರಿದ್ದಾರೆ.

ಸೈನಾ ನೆಹ್ವಲ್ ಬಗ್ಗೆ:

  • ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು. ಸೈನಾ ಅವರು ಈ ಸಾಧನೆಯನ್ನು 2012 ಲಂಡನ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಮಾಡಿದರು.
  • ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಮತ್ತು ಇಂಡೋನೇಷಿಯಾ ಒಪನ್ ಗೆದ್ದ ಭಾರತದ ಮೊದಲ ಕ್ರೀಡಾಪಟು.
  • ಕ್ರೀಡಾಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಇವರಿಗೆ 2009 ರಲ್ಲಿ ಅರ್ಜುನ ಪ್ರಶಸ್ತಿ, 2009-10 ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, 2010 ರಲ್ಲಿ ಪದ್ಮ ಶ್ರೀ ಮತ್ತು 2016 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

ಅಂತಾರಾಷ್ಟ್ರೀಯ ಒಲಂಪಿಕ್ ಅಥ್ಲೆಟಿಕ್ ಗಳ ಆಯೋಗ ಸಮಿತಿ:

  • ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ (ಐಒಸಿ) ಅಥ್ಲೀಟ್‌ಗಳ ಆಯೋಗವನ್ನು 1981ರಲ್ಲಿ ಸ್ಥಾಪಿಸಲಾಗಿದ್ದು, ಒಲಂಪಿಕ್ ಚಾರ್ಟರ್ 21ರ ನಿಯಮದ ಪ್ರಕಾರ ಸ್ಥಾಪಿಸಲಾಗಿದೆ.
  • ಅಂತಾರಾಷ್ಟ್ರೀಯ ಒಲಂಪಿಕ್ ಸಮಿತಿ ಮತ್ತು ಕ್ರೀಡಾಪಟುಗಳ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ.
  • ವರ್ಷಕ್ಕೆ ಒಂದು ಅಥವಾ ಎರಡು ಬಾರಿ ಸಭೆ ಸೇರುವ ಮೂಲಕ ಐಒಸಿಗೆ ಸಲಹೆ ನೀಡುವ ಕೆಲಸವನ್ನು ಈ ಆಯೋಗ ಮಾಡುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.