ಮುಖ್ಯಮಂತ್ರಿ ಆದರ್ಶ ಗ್ರಾಮದಡಿ 150 ಗ್ರಾಮಗಳ ಅಭಿವೃದ್ದಿ

home_upಕೇಂದ್ರ ಸರ್ಕಾರದ ಸಂಸದರ ಆದರ್ಶ ಗ್ರಾಮ ಮಾದರಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಆದರ್ಶ ಗ್ರಾಮ ಯೋಜನೆ ಜಾರಿಗೆ ತರಲಾಗಿದ್ದು, ಈಯೋಜನೆಯಡಿ 150 ಗ್ರಾಮಗಳು ಮತ್ತು ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 200 ಗ್ರಾಮಗಳನ್ನು ಅಭಿವೃದ್ದಿಪಡಿಸಲಾಗುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಹೇಳಿದ್ದಾರೆ.

ಮುಖ್ಯಮಂತ್ರಿ ಆದರ್ಶ ಗ್ರಾಮ ಯೋಜನೆ

  • ಮುಖ್ಯಮಂತ್ರಿ ಆದರ್ಶ ಯೋಜನೆಯಡಿ ₹ 150 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ಹೆಚ್ಚಾಗಿರುವ 100 ಗ್ರಾಮಗಳು ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಾಗಿರುವ 50 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
  • ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಶೇ 50 ಕ್ಕಿಂತ ಹೆಚ್ಚಿರುವ ಸುಮಾರು 2,000 ಗ್ರಾಮಗಳು ಕರ್ನಾಟಕದಲ್ಲಿವೆ. ಇದರಲ್ಲಿ, ಪರಿಶಿಷ್ಟ ಜಾತಿಯ 100 ಗ್ರಾಮಗಳು ಹಾಗೂ ಪರಿಶಿಷ್ಟ ಪಂಗಡದ 50 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
  • ಪ್ರತಿಯೊಂದು ಗ್ರಾಮವನ್ನು ತಲಾ ₹ 1 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಒಳಚರಂಡಿ, ವಸತಿ, ವಿದ್ಯುತ್‌, ಸಮುದಾಯ ಭವನ, ಶಾಲಾ ಕಟ್ಟಡಗಳ ರಿಪೇರಿ ಸೇರಿದಂತೆ ವಿವಿಧ ಕಾಮಗಾರಿಗಳ ಮೂಲಕ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆಯ ಅಡಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗೆ ನೀಡಿರುವ ಅನುದಾನದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ:

  • ಪ್ರಧಾನಮಂತ್ರಿ ಆದರ್ಶಗ್ರಾಮ ಯೋಜನೆಯಡಿ ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ ಹಾಗೂ ಕಲಬುರ್ಗಿ ಜಿಲ್ಲೆಗಳ 200 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
  • ಈ ಯೋಜನೆಗೆ ಕೇಂದ್ರ ಸರ್ಕಾರ ₹ 40.10 ಕೋಟಿ ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರವು 2016–17 ನೇ ಸಾಲಿನ ಆಯವ್ಯಯದಲ್ಲಿ ₹ 40 ಕೋಟಿ ಮೀಸಲಿಟ್ಟಿದೆ. ಪ್ರತಿಯೊಂದು ಗ್ರಾಮಕ್ಕೆ ತಲಾ ₹ 40 ಲಕ್ಷ ನೀಡಲಾಗುವುದು. ಇದರಲ್ಲಿ ಕೇಂದ್ರದ ಪಾಲು ₹ 20 ಲಕ್ಷ ಮತ್ತು ರಾಜ್ಯದ ಪಾಲು ₹ 20 ಲಕ್ಷ ಬಿಡುಗಡೆ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.