Oops! It appears that you have disabled your Javascript. In order for you to see this page as it is meant to appear, we ask that you please re-enable your Javascript!

ಫೆಬ್ರವರಿ 28: ರಾಷ್ಟ್ರೀಯ ವಿಜ್ಞಾನ ದಿನ (National Science Day)

Scice_upಪ್ರತಿ ವರ್ಷ ಫೆಬ್ರವರಿ 28 ರಂದು “ರಾಷ್ಟ್ರೀಯ ವಿಜ್ಞಾನ ದಿನ”ವನ್ನು ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. “Science and Technology for Specially Abled Persons” ಇದು ಈ ವರ್ಷದ ರಾಷ್ಟ್ರೀಯ ವಿಜ್ಞಾನ ದಿನ ಧ್ಯೇಯವಾಕ್ಯವಾಗಿದೆ. ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ. 1928ರ ಫೆಬ್ರವರಿ 28ರಂದು ‘ರಾಮನ್ ಇಫೆಕ್ಟ್’ ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು. ರಾಮನ್ ಅವರ ಈ ಆವಿಷ್ಕಾರಕ್ಕಾಗಿ 1930 ರಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿತ್ತು.

ಹಿನ್ನಲೆ:

  • 1986 ರಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.
  • ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಮ್ಯೂನಿಕೇಷನ್ ಸರ್ಕಾರಕ್ಕೆ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವೆಂದು ಘೋಷಿಸಲಾಯಿತು.
  • ಮೊಟ್ಟ ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು 28ನೇ ಫೆಬ್ರವರಿ 1987 ರಂದು ಆಚರಿಸಲಾಯಿತು.

ರಾಮನ್ ಎಫೆಕ್ಟ್ ಎಂದರೇನು?

ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನಾವು ನೋಡಬಹುದು (ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವ ಉದಾಹರಣೆ ನೆನಪಿಸಿಕೊಳ್ಳಿ). ಹೀಗೆ ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ. ಇದನ್ನು ರಾಮನ್ ಪರಿಣಾಮವೆಂದು ಕರೆಯಲಾಗುತ್ತದೆ.

One Response to “ಫೆಬ್ರವರಿ 28: ರಾಷ್ಟ್ರೀಯ ವಿಜ್ಞಾನ ದಿನ (National Science Day)”

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.